May 10, 2026
Sunday, May 10, 2026
spot_img

ಬೆಂಗಳೂರಿಗರ ದಾಹಕ್ಕೆ ಮೇಕೆದಾಟು ಸಂಜೀವಿನಿ: ಕೇಂದ್ರದ ‘ಗ್ರೀನ್ ಸಿಗ್ನಲ್’ಗಾಗಿ ಡಿಕೆಶಿ ವೈಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

“ವಿಶ್ವದ ಕಣ್ಣು ಬೆಂಗಳೂರಿನ ಮೇಲಿದೆ, ಇಂತಹ ನಗರಕ್ಕೆ ಕುಡಿಯುವ ನೀರು ಪೂರೈಸುವುದು ನಮ್ಮ ಆದ್ಯ ಕರ್ತವ್ಯ,” ಎಂದು ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ.

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ‘ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.

ಬೆಂಗಳೂರಿನ 1.50 ಕೋಟಿ ಜನಸಂಖ್ಯೆಗೆ ನೀರು ಒದಗಿಸಲು ‘ಮೇಕೆದಾಟು ಸಮತೋಲಿತ ಅಣೆಕಟ್ಟು’ ಅನಿವಾರ್ಯವಾಗಿದೆ. ಸುಪ್ರೀಂ ಕೋರ್ಟ್ ಕೂಡ ಈ ಯೋಜನೆಯ ಪರವಾಗಿ ತೀರ್ಪು ನೀಡಿರುವುದರಿಂದ, ಕೇಂದ್ರ ಸರ್ಕಾರ ಶೀಘ್ರವಾಗಿ ಅನುಮತಿ ನೀಡುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಈ ಯೋಜನೆಯಿಂದ ಕೇವಲ ಕುಡಿಯುವ ನೀರಷ್ಟೇ ಅಲ್ಲದೆ, 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯೂ ಸಾಧ್ಯವಾಗಲಿದೆ.

ಅಣೆಕಟ್ಟುಗಳ ಸುರಕ್ಷತೆ ಕಾಪಾಡುತ್ತಲೇ ಆರ್ಥಿಕ ಪ್ರಗತಿ ಸಾಧಿಸಲು ಶಿವಕುಮಾರ್ ಅವರು ಹೊಸದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ:

ಅಣೆಕಟ್ಟುಗಳ ಸುತ್ತಲಿನ 500 ಮೀಟರ್‌ ವ್ಯಾಪ್ತಿಯ ಕಠಿಣ ನಿರ್ಬಂಧಗಳನ್ನು ಸಡಿಲಗೊಳಿಸಬೇಕು. ಅಣೆಕಟ್ಟುಗಳ ಪರಿಸರದಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದರಿಂದ ಸ್ಥಳೀಯ ಆರ್ಥಿಕತೆ ಬಲಗೊಳ್ಳಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !