September 16, 2026
Wednesday, September 16, 2026
spot_img

ಸಂಜು ಸೈಲೆಂಟ್, ಮ್ಹಾತ್ರೆ ವೈಲೆಂಟ್: ರುತುರಾಜ್-ಆಯುಷ್ ಜೊತೆಯಾಟಕ್ಕೆ ಪಂಜಾಬ್ ಕಿಂಗ್ಸ್ ಕಂಗಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಮುಖಭಂಗ ಅನುಭವಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್, ಇಂದು ತನ್ನ ಭದ್ರಕೋಟೆ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಸವಾಲನ್ನು ಎದುರಿಸುತ್ತಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವಂತಾದ ಸಿಎಸ್‌ಕೆಗೆ ಆರಂಭದಲ್ಲಿ ಅಘಾತ ಎದುರಾಯಿತು. ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ (7 ರನ್) ಸತತ ಎರಡನೇ ಪಂದ್ಯದಲ್ಲೂ ವೈಫಲ್ಯ ಅನುಭವಿಸಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

ಆದರೆ, ಸಂಜು ವಿಕೆಟ್ ಪತನದ ನಂತರ ಒಂದಾದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಯುವ ಪ್ರತಿಭೆ ಆಯುಷ್ ಮ್ಹಾತ್ರೆ ಪಂಜಾಬ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು.

ವಿಶೇಷವಾಗಿ ಅಬ್ಬರಿಸಿದ ಆಯುಷ್ ಮ್ಹಾತ್ರೆ, ಕೇವಲ 29 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 4 ಬೌಂಡರಿಗಳ ನೆರವಿನಿಂದ ಐಪಿಎಲ್ ವೃತ್ತಿಜೀವನದ ಎರಡನೇ ಅರ್ಧಶತಕ ಸಿಡಿಸಿದರು. ಇವರಿಬ್ಬರ ಮಿಂಚಿನ ಆಟದಿಂದಾಗಿ ಸಿಎಸ್‌ಕೆ ಕೇವಲ 10 ಓವರ್‌ಗಳಲ್ಲಿ 100 ರನ್ ಗಡಿ ದಾಟಿ ಬೃಹತ್ ಮೊತ್ತದತ್ತ ದಾಪುಗಾಲು ಹಾಕುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !