spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶ್ರೀಲಂಕಾ ವಿರುದ್ಧದ ಪ್ಲೇಯಿಂಗ್ ಇಲೆವೆನ್​ನಲ್ಲಿ ಸಂಜು ಸ್ಯಾಮ್ಸನ್ ಹೆಸರು ಕಾಣೆ: ಬಿಸಿಸಿಐ ಹೇಳಿದ್ದೇನು?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಇಲೆವೆನ್‌ನಿಂದ ಸಂಜು ಸ್ಯಾಮ್ಸನ್ ಹೆಸರು ಕಾಣೆಯಾಗಿದ್ದು, ಅವರ ಸ್ಥಾನದಲ್ಲಿ, ಇಶಾನ್ ಕಿಶನ್ ಅವರ ಚೊಚ್ಚಲ ಪ್ರವೇಶವಾಗಿದೆ.
ಇನ್ನು ಸ್ಯಾಮ್ಸನ್‌ ಅವರನ್ನು ಏಕೆ ಆಯ್ಕೆ ಮಾಡಲಿಲ್ಲ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಈ ದೊಡ್ಡ ಪ್ರಶ್ನೆಗೆ ಬಿಸಿಸಿಐ ಸ್ವತಃ ಉತ್ತರ ನೀಡಿದೆ.
ಆಡುವ ಹನ್ನೊಂದರಲ್ಲಿ ಸ್ಯಾಮ್ಸನ್ ಆಯ್ಕೆಯಾಗದಿರಲು ಕಾರಣ ಅವರ ಗಾಯ ಎಂದು ತಿಳಿಸಿದೆ.
ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಾಗಿರುವ ಗಾಯ ಮತ್ತು ಅವರನ್ನು ತಂಡದಲ್ಲಿ ಆಯ್ಕೆ ಮಾಡದಿರುವ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ. ಸ್ಯಾಮ್‌ಸನ್‌ಗೆ ಮೊಣಕಾಲಿನ ಗಾಯವಾಗಿದೆ ಈ ಕಾರಣದಿಂದಾಗಿ ಅವರು ಆಯ್ಕೆಗೆ ಲಭ್ಯವಿರಲಿಲ್ಲ.
ಅವರ ಗಾಯದ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡ ನಿರಂತರವಾಗಿ ನಿಗಾ ವಹಿಸುತ್ತಿದೆ. ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸ್ಯಾಮ್ಸನ್ ಆಡುವ ಮತ್ತು ಚೊಚ್ಚಲ ಪ್ರವೇಶ ಮಾಡುವ ಸಾಧ್ಯತೆಗಳು ಹೆಚ್ಚಾಗಿದ್ದವು. ಸ್ಯಾಮ್ಸನ್ ಇದುವರೆಗೆ ಭಾರತದ ಪರ ಕೇವಲ 7 ಟಿ 20 ಪಂದ್ಯಗಳನ್ನು ಆಡಿದ್ದಾರೆ. ದ್ರಾವಿಡ್ ಮತ್ತು ಧವನ್ ಅವರ ದೃಷ್ಟಿಯಲ್ಲಿ ವಿಕೆಟ್ ಕೀಪಿಂಗ್ಗಾಗಿ ಅವರು ಮೊದಲ ಆಯ್ಕೆಯಾಗಿದ್ದರು. ಆದರೆ ಗಾಯದಿಂದಾಗಿ ಅವರು ಪಾದಾರ್ಪಣೆ ಮಾಡುವ ಅವಕಾಶ ಕಳೆದುಕೊಂಡಿದ್ದಾರೆ. ಹೀಗಾಗಿ ಹುಟ್ಟುಹಬ್ಬದ ದಿನ ಇಶಾನ್ ಕಿಶನ್ ಅವರಿಗೆ ಈ ಅವಕಾಶ ಸಿಕ್ಕಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss