ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಟಿ20 ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ತಯಾರಿಯನ್ನು ಚುರುಕುಗೊಳಿಸಿದೆ. ಆದರೆ ಆರಂಭಿಕ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರ ಫಾರ್ಮ್ ಮಾತ್ರ ತಂಡಕ್ಕೆ ಚಿಂತೆಯ ವಿಷಯವಾಗಿ ಪರಿಣಮಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಗೆಲುವಿನ ಹಾದಿಯಲ್ಲಿ ಸಾಗಿದರೂ, ಸಂಜು ಬ್ಯಾಟ್‌ನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.
ಮೊದಲ ಪಂದ್ಯದಲ್ಲಿ 10 ರನ್, ಎರಡನೇ ಪಂದ್ಯದಲ್ಲಿ 6 ರನ್ ಗಳಿಸಿದ ಸಂಜು, ಮೂರನೇ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದರು. ಒಟ್ಟಾರೆ ಮೂರು ಪಂದ್ಯಗಳಲ್ಲಿ 13 ಎಸೆತಗಳನ್ನು ಎದುರಿಸಿ ಕೇವಲ 16 ರನ್ ಗಳಿಸಿರುವುದು ಟೀಕೆಗೆ ಕಾರಣವಾಗಿದೆ. ಈ ಹಿನ್ನೆಲೆ ಮಾಜಿ ನಾಯಕ ಅಜಿಂಕ್ಯ ರಹಾನೆ ಸಂಜು ಆಟದ ಕುರಿತು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕ್ರಿಕ್‌ಬಜ್ ಕಾರ್ಯಕ್ರಮದಲ್ಲಿ ಮಾತನಾಡಿದ ರಹಾನೆ, “ಸಂಜು ತಮ್ಮ ಸಹ ಆರಂಭಿಕ ಅಭಿಷೇಕ್ ಶರ್ಮಾ ಅವರಂತೆ ಮೊದಲ ಎಸೆತದಿಂದಲೇ ದೊಡ್ಡ ಶಾಟ್‌ಗಳಿಗೆ ಹೋಗುತ್ತಿದ್ದಾರೆ. ಇದು ಅನಗತ್ಯ ಒತ್ತಡ ಸೃಷ್ಟಿಸಿ ವಿಕೆಟ್ ಪತನಕ್ಕೆ ಕಾರಣವಾಗುತ್ತಿದೆ. ಸಂಜು ಯಾರನ್ನೂ ನಕಲು ಮಾಡಬಾರದು, ತಮ್ಮ ಸಹಜ ಆಟವನ್ನೇ ಮುಂದುವರಿಸಬೇಕು” ಎಂದು ಸಲಹೆ ನೀಡಿದ್ದಾರೆ.
ಇದೇ ಸರಣಿಯಲ್ಲಿ ಇಶಾನ್ ಕಿಶನ್ ಸೇರಿದಂತೆ ಇತರ ಬ್ಯಾಟ್ಸ್‌ಮನ್‌ಗಳು ಉತ್ತಮ ಲಯದಲ್ಲಿರುವುದರಿಂದ, ತಂಡದ ಮ್ಯಾನೇಜ್‌ಮೆಂಟ್ ಸಂಜು ಜೊತೆ ಮಾತನಾಡಿ ಆತ್ಮವಿಶ್ವಾಸ ತುಂಬಬೇಕಿದೆ ಎನ್ನುವುದು ಕ್ರಿಕೆಟ್ ವಲಯದ ಅಭಿಪ್ರಾಯವಾಗಿದೆ.




