ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಜು ಸ್ಯಾಮ್ಸನ್ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಮೀಬಿಯಾ ವಿರುದ್ಧ ಆಡುವ ಮೂಲಕ ಗಮನ ಸೆಳೆದಿದ್ದಾರೆ. ಅಭಿಷೇಕ್ ಶರ್ಮಾ ಫಿಟ್ನೆಸ್ ಸಮಸ್ಯೆಯಿಂದಾಗಿ ಅವರಿಗೆ ಅವಕಾಶ ಸಿಕ್ಕಿದ್ದು, ಈ ಪಂದ್ಯದಲ್ಲಿ ಅವರು ಎರಡು ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದಾರೆ.
31ನೇ ವಯಸ್ಸಿನಲ್ಲಿ ಟಿ20 ವಿಶ್ವಕಪ್‌ಗೆ ಪಾದಾರ್ಪಣೆ ಮಾಡಿದ ಸಂಜು, ಈ ಪಟ್ಟಿಯಲ್ಲಿ ಹಿರಿಯ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಇದುವರೆಗೆ ಈ ಸಾಧನೆಗೆ ಸೂರ್ಯಕುಮಾರ್ ಯಾದವ್ ಹೆಸರು ಮುಂಚೂಣಿಯಲ್ಲಿತ್ತು.
ಇದನ್ನೂ ಓದಿ:
ಪಂದ್ಯದಲ್ಲಿ ಸಂಜು 8 ಎಸೆತಗಳಲ್ಲಿ 22 ರನ್ ಗಳಿಸಿ ಔಟಾದರೂ, ತಮ್ಮ ಮೊದಲ ಇನ್ನಿಂಗ್ಸ್‌ನಲ್ಲೇ 3 ಸಿಕ್ಸರ್ ಬಾರಿಸಿ ಹೊಸ ದಾಖಲೆ ಬರೆದರು. ಈ ಮೂಲಕ ಅವರು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಹಲವು ದಿಗ್ಗಜರನ್ನು ಹಿಂದಿಕ್ಕಿ, ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯರ ಪೈಕಿ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ.



