ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಮ್ಯಾ ಹಾಗೂ ಶ್ರೀನಗರ ಕಿಟ್ಟಿ ನಟನೆಯ ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರದ ಮುಂದುವರಿದ ಭಾಗ ‘ಸಂಜು ವೆಡ್ಸ್ ಗೀತಾ 2’ ಮಾಡಲು ನಾಗಶೇಖರ್ ಮುಂದಾಗಿದ್ದು, ಚಿತ್ರದ ಕುರಿತು ಮಾಹಿತಿಯನ್ನು ನಾಗಶೇಖರ್ ಹೊರ ಹಾಕಿದ್ದಾರೆ.
‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ನಾಯಕನಾಗಿ ಶ್ರೀನಗರ ಕಿಟ್ಟಿ ಇರಲಿದ್ದು , ನಾಯಕಿಗಾಗಿ ಚಿತ್ರತಂಡ ಹುಡುಕಾಟ ನಡೆಸುತ್ತಿದೆ. ಈ ಹಿಂದೆ ಮೊದಲ ಭಾಗದಲ್ಲಿ ನಟಿ ರಮ್ಯಾ ಕಾಣಿಸಿಕೊಂಡಿದ್ದರು. ಆದ್ರೆ ರಮ್ಯಾ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಇರುವ ಕಾರಣದಿಂದ ಚಿತ್ರತಂಡ ಬೇರೆ ನಟಿಯರಿಗೆ ಮಣೆ ಹಾಕುತ್ತಿದೆ.
ಪ್ರಕಾಶ್ ರೈ- ರಮ್ಯಾಕೃಷ್ಣ ನಟನೆ
ಮತ್ತೊಂದು ಅಚ್ಚರಿಯ ಸಂಗತಿ ಅಂದರೆ, ಈ ಸಿನಿಮಾದಲ್ಲಿ ದಕ್ಷಿಣದ ಖ್ಯಾತ ಕಲಾವಿದರಾದ ಪ್ರಕಾಶ್ ರೈ ಹಾಗೂ ರಮ್ಯಾಕೃಷ್ಣ ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಈಗಾಗಲೇ ಹಾಡುಗಳಿಗೆ ಸಂಗೀತ ಸಂಯೋಜನೆಯ ಕೆಲಸ ಪ್ರಾರಂಭವಾಗಿದೆ.