ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಧರ ಬಾಳಿಗೆ ಬೆಳಕಾಗಿದ್ದ ಹಾಗೂ ಲಕ್ಷಾಂತರ ಜನರ ದೃಷ್ಟಿ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯದಲ್ಲಿ ತೊಡಗಿದ್ದ ಶಂಕರ ನೇತ್ರಾಲಯದ ಸಂಸ್ಥಾಪಕ ಡಾ. ಎಸ್.ಎಸ್. ಬದ್ರಿನಾಥ್ (83) ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಚೆನ್ನೈ ನಿವಾಸದಲ್ಲಿ ಅವರು ನಿಧನರಾಗಿದ್ದು, ಅವರ ನಿಧನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
ತಮಿಳುನಾಡು ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ರಾಮ ಸುಗಂಧನ್ ಅವರು ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸಂತಾಪ ಸೂಚಿಸಿದ್ದಾರೆ.
ಡಾ.ಎಸ್.ಎಸ್. ಬದ್ರಿನಾಥ್ ಅವರ ನಿಧನಕ್ಕೆ ವೈದ್ಯಕೀಯ, ರಾಜಕೀಯ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.