ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಜನ ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಕಾಶಿಯ ಗಂಗಾನದಿಯಲ್ಲಿ ಪವಿತ್ರ ಸ್ನಾನಕ್ಕೆ ಜನಸ್ತೋಮ ನೆರದಿದ್ದು,ಕೋವಿಡ್ ನಿಯಮ ಉಲ್ಲಂಘನೆಯಾಗಿದೆ.
ಧನುರಾಶಿಯಿಂದ ಮಕರ ರಾಶಿಗೆ ಸೂರ್ಯನ ಪ್ರವೇಶವಾಗಿದ್ದು, ಇಂದು ಪವಿತ್ರ ಸ್ನಾನ ನಡೆಯುತ್ತದೆ. ದಂಡಿನಲ್ಲಿ ಭಕ್ತರು ಆಗಮಿಸಿದ್ದು, ಕೋವಿಡ್ ನಿಯಮಗಳು ಉಲ್ಲಂಘನೆಯಾಗಿವೆ.
ಗಂಗಾಸಾಗರದಲ್ಲಿ ಭಾಗಿಯಾಗುವ ಯಾತ್ರಿಕರಿಗೆ ಈಗಾಗಲೇ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ ಶೇ.೦.62 ಮಂದಿಗೆ ಸೋಂಕು ತಗುಲಿದೆ.