ಹೊಸದಿಗಂತ ಡಿಜಿಟಲ್ ಡೆಸ್ಕ್:
2023 ರ ಜ್ಞಾನಪೀಠ ಪ್ರಶಸ್ತಿಯನ್ನು ಖ್ಯಾತ ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯರ, ಚಲನಚಿತ್ರ ಸಾಹಿತಿ, ಉರ್ದು ಕವಿ ಗುಲ್ಜಾರ್ ಗೆ ಘೋಷಿಸಲಾಗಿದೆ. ಜ್ಞಾನಪೀಠ ಸಮಿತಿಯು ಜಂಟಿಯಾಗಿ 58ನೇ ಜ್ಞಾನಪೀಠ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಜ್ಞಾನಪೀಠ ಪ್ರಶಸ್ತಿಯು ದೇಶದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾಗಿದೆ.
ಗುಲ್ಜಾರ್ ಹಿಂದಿ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಆದ ಹೆಸರನ್ನು ಗಳಿಸಿದ್ದಾರೆ ಮತ್ತು ಅವರ ಚಲನಚಿತ್ರ ಸಾಹಿತ್ಯವು ಎಲ್ಲರಿಗೂ ಬಹಳ ಅಚ್ಚು ಮೆಚ್ಚು. ಅವರು ತಮ್ಮ ಗಜಲ್‌ಗಳ ಮೂಲಕ ಹೆಚ್ಚು ಪ್ರಸಿದ್ಧರಾದವರು. 12ನೇ ತರಗತಿಯಲ್ಲಿ ಅನುತ್ತೀರ್ಣರಾದರೂ ಸಾಹಿತ್ಯದ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿದ್ದಾರೆ.
ಮಧ್ಯಪ್ರದೇಶದ ಚಿತ್ರಕೂಟದಲ್ಲಿ ತುಳಸಿ ಪೀಠದ ಸಂಸ್ಥಾಪಕ ಮತ್ತು ಸಂಸ್ಕೃತ ವಿದ್ವಾಂಸರೂ ಆಗಿರುವ ಪ್ರಖ್ಯಾತ ಹಿಂದು ನಾಯಕ ರಾಮಭದ್ರಾಚಾರ್ಯ ಅವರಿಗೆ 58 ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.