ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಹೈಟೆಕ್‌ ವೇಶ್ಯಾವಾಟಿಕೆ ಹಾಗೂ ಅಕ್ರಮ ದಂಧೆಗಳಲ್ಲಿ ಪ್ರಮುಖ ಆರೋಪಿಯಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲ ಏರುಪೇರಾಗಿದ್ದು, ಸಿಐಡಿ ಅಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆರೋಪಿಯು ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ
ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರವಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಕೂಡಲೇ ಆತನನ್ನು ಬೌರಿಂಗ್‌
ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತದನಂತರ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ವೇಶ್ಯಾವಾಟಿಕೆ, ಅತ್ಯಾಚಾರ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮಂಜುನಾಥ್ ಕೆ‌.ಎಸ್.ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎರಡನೇ ಪತ್ನಿ ನೀಡಿರುವ ದೂರಿನ ಅನ್ವಯ ಜ. 2 ರಂದು ಪ್ರಕರಣ ದಾಖಲಾಗಿತ್ತು.

ಪತ್ನಿಯ ವಿರುದ್ಧ ಸುಳ್ಳು ಪ್ರಕರಣ, ಮಾನಸಿಕ ಹಾಗೂ ದೈಹಿಕ‌ ಕಿರುಕುಳ ಪ್ರಕರಣದಲ್ಲಿ ಬಂಧಿತನಾಗಿರುವ ಸ್ಯಾಂಟ್ರೋ ರವಿ ಸದ್ಯ ಸಿಐಡಿ ವಶದಲ್ಲಿದ್ದಾನೆ. ಜನವರಿ 30ಕ್ಕೆ ಕಸ್ಟಡಿ ಅವಧಿ ಅಂತ್ಯವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!