ಸ್ಯಾಂಟ್ರೋ ರವಿಗೆ 14 ದಿನಗಳ ಕಾಲ ನ್ಯಾಯಾಂಗಗಳ ಬಂಧನ

ಹೊಸದಿಗಂತ ವರದಿ,ಮೈಸೂರು:

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಬಂಧಿತನಾಗಿರುವ ಸ್ಯಾಂಟ್ರೋ ರವಿಯನ್ನು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದರು.
ಗುಜರಾತ್‌ನಲ್ಲಿ ಸ್ಯಾಂಟ್ರೋ ರವಿ ಹಾಗೂ ಆತನ ಸಹಚರರಾದ ರಾಮ್‌ಜೀ, ಮಧುಸೂದನ್, ಸತೀಶ್‌ರನ್ನು ಬಂಧಿಸಿ, ಮೈಸೂರಿಗೆ ಕರೆತಂದು ವಿಜಯನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದ ಪೊಲೀಸರು, ಇಂದು ಎರಡನೇ ಶನಿವಾರ ನ್ಯಾಯಾಲಯಕ್ಕೆ ರಜೆ ಇದ್ದ ಕಾರಣ ಬಿಗಿ ಭದ್ರತೆಯಲ್ಲಿ ಸಂಜೆ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನ್ಯಾಯಾಧೀಶರ ಮನೆಗೆ ಆರೋಪಿಗಳನ್ನು ಹಾಜರುಪಡಿಸಿದರು.
ಪ್ರಕರಣಗಳಿಗೆ ಸಂಬAಧಿಸಿದAತೆ ಆರೋಪಿ ಸ್ಯಾಂಟ್ರೋ ರವಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಾಗಿದೆ. ಅಲ್ಲದೇ ಹೆಚ್ಚಿನ ತನಿಖೆಯನ್ನು ನಡೆಸಬೇಕಾಗಿರುವ ಕಾರಣ, ಆತನನ್ನು ೧೪ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿಗಳು ನ್ಯಾಯಾಧೀಶರಿಗೆ ಮನವಿ ಮಾಡಿದರು. ಸೋಮವಾರ ಈ ಬಗ್ಗೆ ಓಪನ್ ಕೋರ್ಟ್ನಲ್ಲಿ ಮನವಿ ಮಾಡಿಕೊಳ್ಳಿ ಎಂದು ಸೂಚಿಸಿದ ನ್ಯಾಯಾಧೀಶರು ಸ್ಯಾಂಟ್ರೋ ರವಿ ಹಾಗೂ ಆತನ ಸಹಚರರನ್ನು ೧೪ ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಲು ಆದೇಶಿಸಿದರು. ಬಳಿಕ ಪೊಲೀಸರು ಆರೋಪಿಗಳನ್ನು ಅಲ್ಲಿಂದ ಕೇಂದ್ರ ಕಾರಾಗೃಹಕ್ಕೆ ಕರೆತಂದು ಜೈಲಿಗೆ ಹಾಕಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!