ಬಿರುಗಾಳಿ ಮಳೆಯಿಂದಾಗಿ ಮಹಾಕಾಲ್ ಕಾರಿಡಾರ್‌ನ ಸಪ್ತರುಷಿ ಪ್ರತಿಮೆಗೆ ಹಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಉಜ್ಜಯನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿರುವ ಮಹಾಕಾಲ್ ಲೋಕ್ ಕಾರಿಡಾರ್‌ನ ಸಪ್ತಋಷಿಗಳ ಪ್ರತಿಮೆಗೆ ಭಾರೀ ಬಿರುಗಾಳಿ, ಮಳೆಯಿಂದಾಗಿ ಹಾನಿಯಾಗಿದೆ.

ಅಲ್ಲದೇ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಏಳು ಪ್ರತಿಮೆಗಳಲ್ಲಿ ಆರು ಪ್ರತಿಮೆಗಳನ್ನು ಈಗಾಗಲೇ ಸ್ಥಳಾಂತರಗೊಳಿಸಲಾಗಿದೆ. ಮಹಾಕಾಲ್ ಲೋಕದಲ್ಲಿ 155 ವಿಗ್ರಹಗಳಿದ್ದು, ಸಾಕಷ್ಟು ವಿಗ್ರಹಗಳಿಗೆ ಹಾನಿಯಾಗಿದೆ. ಹಾನಿಗೊಳಗಾದ ಮೂರ್ತಿಗಳನ್ನು ಗುತ್ತಿಗೆದಾರರೇ ದುರಸ್ತಿಗೊಳಿಸುತ್ತಿದ್ದಾರೆ.

ಸುಮಾರು 50 ಮರಗಳು ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕಾರಿಡಾರ್ ನಿರ್ಮಾಣ ಕಾಮಗಾರಿಯಲ್ಲಿ ಪ್ರಮುಖ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!