Wednesday, September 27, 2023

Latest Posts

ತೆಲುಗಿನತ್ತ ಗೆದ್ದು ಗೆದ್ದು ಬೀಗಿದ ‘ಸಪ್ತಸಾಗರದಾಚೆ ಎಲ್ಲೋ’!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ಕನ್ನಡದಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಇದೀಗ ತೆಲುಗು ನೆಲದಲ್ಲಿ ಸದ್ದು ಮಾಡಲು ರೆಡಿಯಾಗಿದೆ.

ಇದೇ ಸೆ.22ರಂದು ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ವರ್ಷನ್‌ನಲ್ಲಿ ಬರುತ್ತಿದೆ.

ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ಹಾಗಾಗಿ ತೆಲುಗು ಅಂಗಳಕ್ಕೆ ಹಾರಲು ಸಜ್ಜಾಗಿದೆ. ‘ಸಪ್ತ ಸಾಗರಲು ದಾಟಿ’ ಎಂಬ ಟೈಟಲ್‌ನಲ್ಲಿ ತೆಲುಗು ಸಿನಿಮಾ ಸೆ.22ರಂದು ಬಿಡುಗಡೆಯಾಗುತ್ತಿದೆ.

ಕನ್ನಡ ಸಿನಿಮಾ ಪ್ರೇಕ್ಷಕರು ಅಪ್ಪಿ ಒಪ್ಪಿಕೊಂಡ ಹಾಗೇ ತೆಲುಗು ವರ್ಷನ್‌ನಲ್ಲೂ ಗೆದ್ದು ಬೀಗುತ್ತಾ? ಕಾದು ನೋಡಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!