ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ನಡೆಯುತ್ತಿದೆ.ಟೀಮ್ ಇಂಡಿಯಾ ಉತ್ತಮ ಚೇಸಿಂಗ್ ಮಾಡುತ್ತಿದೆ.
ಇದರ ನಡುವೆ ಗ್ಯಾಲರಿಯಲ್ಲಿ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್ ಪ್ರತ್ಯಕ್ಷರಾಗಿದ್ದಾರೆ. ಇದನ್ನು ಕಂಡ ನೆಟ್ಟಿಗರು ಮೀಮ್ಸ್ ಹಾಗೂ ಭರ್ಜರಿ ಕಮೆಂಟ್ ಮಾಡಲು ಶುರುಮಾಡಿದ್ದಾರೆ .
ಇತ್ತ ಶುಭಮನ್ ಗಿಲ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದು, ಹೀಗಾಗಿ ಸಾರಾ ತೆಂಡೂಲ್ಕರ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಈಗಾಗಲೇ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಜೊತೆ ಸಾರಾ ತೆಂಡೂಲ್ಕರ್ ಡೇಟಿಂಗ್ ನಡೆಸುತ್ತಿದ್ದಾರೆ ಅನ್ನೋ ಊಹಾಪೋಹಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಲೇ ಇದೆಆದ್ರೆ ಇವರಿಬ್ಬರ ನಡುವಿನ ಡೇಟಿಂಗ್ ಕುರಿತು ಯಾವುದೇ ಅಧಿಕೃತ ಮಾಹಿತಿಗಳಿಲ್ಲ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಡೇಟಿಂಗ್ ನಡೆಸುತ್ತಿದ್ದಾರೆ ಅನ್ನೋ ಮಾತುಗಳು ಪದೇ ಪದೇ ಕೇಳಿಬಂದಿದೆ.