ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಎಸ್.ಎಲ್ ಭೈರಪ್ಪ ವಿಧಿವಶ ಹಿನ್ನೆಲೆ, ಮೈಸೂರಿನಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ಪುತ್ರನ ಅಂತ್ಯಕ್ರಿಯೆ ನೆರವೇರಲಿದೆ.
ತಮ್ಮ ಬರವಣಿಗೆಯ ಮೂಲಕವೇ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದ ಸಾಹಿತಿ ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದರು. ಇಂದು ಇವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ, ಈಗಾಗಲೇ ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಂಡಿದೆ. ಬೆಳಗ್ಗೆ 11:30 ಗಂಟೆಗೆ ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಎಲ್ ಭೈರಪ್ಪ ಅಂತ್ಯಕ್ರಿಯೆ ನೆರವೇರಲಿದೆ.