ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹಳ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟ ಶರತ್ ಬಾಬು ನಿಧನರಾಗಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿದ್ದು, ಇದು ಸುಳ್ಳು ಎಂದು ಶರತ್ ಬಾಬು ಕುಟುಂಬದವರು ಮಾಹಿತಿ ನೀಡಿದ್ದಾರೆ.
ಶರತ್ ಬಾಬು ಅವರು ಆಸ್ಪತ್ರೆಯಲ್ಲಿದ್ದಾರೆ. ಆದರೆ ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದ್ದಾರೆ, ಸುಮ್ಮನೆ ಸುಳ್ಳು ಸುದ್ದಿ ಹಬ್ಬಿ ಮನಸ್ಸಿಗೆ ನೋವಾಗಿದೆ. ಯಾರೂ ಇದನ್ನು ನಂಬಬೇಡಿ ಎಂದು ಶರತ್ ಕುಟುಂಬದವರು ಹೇಳಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಉಸಿರಾಟದ ಸಮಸ್ಯೆಯಾಗಿ ಶರತ್ ಬಾಬು ಅವರನ್ನು ಹೈದರಾಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅವರ ಆರೋಗ್ಯ ಇದೀಗ ಚೇತರಿಕೆ ಕಾಣುತ್ತಿದೆ.