ಹೊಸದಿಗಂತ ವರದಿ ಕಲಬುರಗಿ:
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶನಿವಾರ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್.ವಿ.ಪಿ.ವೃತ್ತದಲ್ಲಿ ಹೈದ್ರಾಬಾದ ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ ವಲ್ಲಭಭಾಯ್ ಪಟೇಲ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಮುಖ್ಯಮಂತ್ರಿಗಳಿಗೆ ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಸಾಥ್ ನೀಡಿದರು.