ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನ ಹಿರಿಯ ನಟ ಸರಿಗಮ ವಿಜಿ ಇಂದು ಬೆಳಗ್ಗೆ ನಿಧನರಾಗಿದ್ದು, ಜ.16ರಂದು ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಲಿದೆ.
ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿರುವ ಸರಿಗಮ ವಿಜಿ ಮೃತದೇಹವನ್ನು ಇಂದು ಮಧ್ಯಾಹ್ನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ನಟನ ನಿವಾಸಕ್ಕೆ ಶಿಫ್ಟ್ ಮಾಡಲಿದ್ದಾರೆ. ಇನ್ನೂ ಜ.16ರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸರಿಗಮ ವಿಜಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ಬಳಿಕ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.