ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತಿದ್ದು, ಇದರಿಂದ ಸಿನಿಮಾ ತಂಡ ಖುಷಿಪಟ್ಟಿದೆ.
ಇಂದು ಭಾನುವಾರ. ಹೀಗಾಗಿ, ಚಿತ್ರದ ಕಲೆಕ್ಷನ್ ಮತ್ತಷ್ಟು ಹೆಚ್ಚಬಹುದು. ಎರಡೇ ದಿನಕ್ಕೆ ಚಿತ್ರ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು ವಿಶೇಷ.
ಶುಕ್ರವಾರ ಸಿನಿಮಾ ರಿಲೀಸ್ ಆಗುವುದು ವಾಡಿಕೆ. ಆದರೆ, ‘ಸರ್ಕಾರು ವಾರಿ ಪಾಟ’ ಸಿನಿಮಾ ಗುರುವಾರ ತೆರೆಗೆ ಬಂತು. ಈ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದ್ದಿದ್ದರಿಂದ ಚಿತ್ರದ ಮೊದಲ ದಿನದ ಕಲೆಕ್ಷನ್ 75 ಕೋಟಿ ರೂಪಾಯಿ ಆಯಿತು. ಎರಡನೇ ದಿನ ಈ ಸಿನಿಮಾ 27.50 ಕೋಟಿ ರೂಪಾಯಿ ಹಾಗೂ ಮೂರನೇ ದಿನ 28.84 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 131.55 ಕೋಟಿ ರೂಪಾಯಿ ಆಗಿದೆ.
ಮಹೇಶ್ ಬಾಬು ಅವರಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ಅವರ ಸಿನಿಮಾಗಳು ದಕ್ಷಿಣದಲ್ಲಿ ಸೂಪರ್ ಹಿಟ್ ಆಗುತ್ತವೆ. ಈ ಹಿಂದೆ ಬಿಡುಗಡೆ ಆಗಿದ್ದ ‘ಸರಿಲೇರು ನೀಕೆವ್ವರು’ ಸಿನಿಮಾ ಕೂಡ ಹಿಟ್ ಆಗಿತ್ತು. ಈಗ ಅವರು ‘ಸರ್ಕಾರು ವಾರಿ ಪಾಟ’ ಚಿತ್ರದ ಮೂಲಕ ಮತ್ತೊಂದು ಗೆಲುವು ಕಂಡಿದ್ದಾರೆ.