March 17, 2026
Tuesday, March 17, 2026
spot_img

ʻಸರ್ಸೆ ಸೆರಗʼ ವಿವಾದ: ಫಿಲ್ಮ್ ಚೇಂಬರ್‌ಗೆ ಲೆಟರ್ ಬರೆದ ಮಹಿಳಾ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಡಿ ಚಿತ್ರದ ‘ಸರ್ಸೆ ಸೆರಗ’ ಹಾಡು ಅಶ್ಲೀಲವಾಗಿದೆ, ಈ ಹಾಡು ಮಹಿಳೆಯರ ಗೌರವಕ್ಕೆ ಧಕ್ಕೆ ಉಂಟಾಗುತ್ತದೆ ಎಂದು ಮಹಿಳಾ ಆಯೋಗ ಆಕ್ಷೇಪ ವ್ಯಕ್ತಪಡಿಸಿ, ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲ ಅವರಿಗೆ ಪತ್ರ ಬರೆದಿದೆ.

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾದ ಈ ಹಾಡಿನ ಸಾಹಿತ್ಯದ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ವಿವಾದ ಹೆಚ್ಚಾದ ಹಿನ್ನೆಲೆಯಲ್ಲಿ ಹಿಂದಿ ಆವೃತ್ತಿಯನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾಗಿದೆ.

ಇದನ್ನೂ ಓದಿ:

ಈ ನಡುವೆ ದೆಹಲಿಯಲ್ಲಿ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತರಿಂದ ದೂರು ದಾಖಲಾಗಿದ್ದು, ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಟಿ ನೋರಾ ಫತೇಹಿ, ನಟ ಸಂಜಯ್ ದತ್ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ 294ನೇ ವಿಧಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಚಿತ್ರತಂಡಕ್ಕೆ ನೋಟಿಸ್ ನೀಡಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !