October 10, 2026
Saturday, October 10, 2026
spot_img

ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ: ಮಹಿಳಾ ಆಯೋಗದ ಮುಂದೆ ಕ್ಷಮೆಯಾಚಿಸಿದ ಸಂಜಯ್ ದತ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಕೆಡಿ: ದಿ ಡೆವಿಲ್’ ಸಿನಿಮಾದ ಸರ್ಸೆ ಸೆರಗ ಸರ್ಸೆ ಹಾಡಿನ ವಿರುದ್ಧ ಎಲ್ಲೆಡೆ ವ್ಯಾಪಕ ವಿರುದ್ಧ ವ್ಯಕ್ತವಾಗುತ್ತಿದ್ದು, ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಇಂದು ನಟ ಸಂಜಯ್ ದತ್ ಹಾಜರಾಗಿ ಕ್ಷಮೆಯಾಚಿಸಿದ್ದಾರೆ.

ಹಾಡಿಗೆ ದೇಶವ್ಯಾಪ್ತಿ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಈ ಹಿನ್ನೆಲೆ ನಟ ಸಂಜಯ್ ದತ್ ಅವರಿಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿತ್ತು.

ಹೀಗಾಗಿ ಇಂದು ವಿಚಾರಣೆಗೆ ಹಾಜರಾದ ಸಂಜಯ್ ದತ್, ಕ್ಷಮೆಯಾಚಿಸಿದ್ದಾರೆ. ಜೊತೆಗೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಬುಡಕಟ್ಟು ಸಮುದಾಯದ 50 ಹುಡುಗಿಯರ ಶಿಕ್ಷಣಕ್ಕೆ ಧನ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಅದೇ ರೀತಿ ಇನ್ಮುಂದೆ ನಟನೆಯ ಸಮಯದಲ್ಲಿ ಮಹಿಳೆಯರು, ಮಕ್ಕಳು ಅಥವಾ ಯಾವುದೇ ವ್ಯಕ್ತಿಯನ್ನು ಅಗೌರವಯಾಗದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಸರ್ಸೆ ಸೆರಗ ಸರ್ಸೆ ಹಾಡಿನನಲ್ಲಿ ನೋರಾ ಫತೇಹಿ ಮತ್ತು ಸಂಜಯ್ ದತ್ ಕಾಣಿಸಿಕೊಂಡಿದ್ದರು.

ಹಾಡಿನ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಲಿರಿಕಲ್ ವಿಡಿಯೋಗಳನ್ನು ಯೂಟ್ಯೂಬ್‌ನಿಂದ ತೆಗೆದುಹಾಕಲಾಗಿತ್ತು.

Must Read