ಸರ್ವೋದಯ ದಿನ: ಜ.30 ರಂದು ಪ್ರಾಣಿ ವಧೆ, ಮಾಂಸ ಮಾರಾಟಕ್ಕೆ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ವೋದಯ ದಿನದ ಅಂಗವಾಗಿ ಜ.30 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಇರುವುದಿಲ್ಲ.
ಹೌದು, ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಧಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.

ಜ.30 ರಂದು ಭಾನುವಾರ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಜಂಟಿ ನಿರ್ದೇಶಕರು( ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾತ್ಮಾ ಗಾಂಧೀಜಿ ಅವರು ಹುತಾತ್ಮರಾದ ದಿನವನ್ನು ಸರ್ವೋದಯ ದಿನವನ್ನಾಗಿ ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!