ಹೊಸದಿಗಂತ ವರದಿ, ಕೊಪ್ಪಳ:
ಜಿಲ್ಲೆಗೆ ಶಶಿಕಲಾ ಜೊಲ್ಲೆ ಹಾಗೂ ವಿಜಯನಗರಕ್ಕೆ ಆನಂದ್ ಸಿಂಗ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇಬ್ಬರು ಹೊಸ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಜನವರಿ 24 ರಂದು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿದ್ದ ಬೊಮ್ಮಾಯಿ ಸರಕಾರ ಈಗ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಮುಜುರಾಯಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಗೆ ಕೊಪ್ಪಳ ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ