ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗುವೆಂದೂ ನೋಡದೆ ನಾಲ್ಕು ವರ್ಷದ ಪುಟಾಣಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಅಮ್ಮನೊಂದಿಗೆ ಮದುವೆಗೆ ಬಂದಿದ್ದ ನಾಲ್ಕು ವರ್ಷದ ಬಾಲಕಿಯನ್ನು ಮದುವೆ ಮನೆಯಿಂದಲೇ ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ.
ಮದುವೆ ಮನೆಯಿಂದ ರಾತ್ರಿ 11 ಗಂಟೆ ಸುಮಾರಿಗೆ ಬಾಲಕಿ ನಾಪತ್ತೆಯಾಗಿದ್ದಳು. ಬಳಿಕ ಆಕೆಗಾಗಿ ಸುತ್ತಮುತ್ತಲೆಲ್ಲಾ ಹುಡುಕಾಟ ನಡೆಸಿದಾಗ, ಪ್ರಜ್ಞಾಹೀನ ಸ್ಥಿತಿಯಲ್ಲಿ ಮದುವೆ ನಿಗದಿಯಾಗಿದ್ದ ಬ್ಯಾಂಕ್ವೆಟ್ ಹಾಲ್ನ ಸಮೀಪದಲ್ಲೇ ಬಾಲಕಿ ಪತ್ತೆಯಾಗಿದ್ದಳು, ಆಕೆಯ ದೇಹದಲ್ಲಿ ಗಾಯದ ಗುರುತುಗಳಿದ್ದು, ರಕ್ತಸ್ರಾವವಾಗುತ್ತಿತ್ತು.
ಕೂಡಲೇ ಆಕೆಯನ್ನು ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಬಾಲಕಿಯ ದೇಹದಲ್ಲಿ ಗಾಯಗಳು ಗಂಭೀರವಾಗಿದ್ದರಿಂದ ಆಕೆಯನ್ನು ಅಲ್ಲಿಂದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು. ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಿದರು.
ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.