ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆಗೆ ಒತ್ತಾಯ ವ್ಯಕ್ತವಾಗುತ್ತಿರುವ ಹೊತ್ತಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಲಿತ ಸಚಿವರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಜಾರಕಿಹೊಳಿ ಹಾಗೂ ಖರ್ಗೆಯವರ ಭೇಟಿ ಮಹತ್ವ ಪಡೆದುಕೊಂಡಿದೆ.
ದೆಹಲಿಯಲ್ಲಿ (Delhi) ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಭೇಟಿಯಾಗಿರುವ ಸತೀಶ್ ಜಾರಕಿಹೊಳಿ, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮೂಡಾ ಪ್ರಕರಣದಲ್ಲಿ ನಾವು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ಪ್ರತಿ ಹಂತದಲ್ಲೂ ನಾವು ಸಮರ್ಥಿಸಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.