ಹಿಂದೂ ಕುರಿತು ಸತೀಶ್ ಜಾರಕಿಹೊಳಿ ಹೇಳಿಕೆ: ಕೆಂಡಾಮಂಡಲವಾದ ರಣದೀಪ್ ಸಿಂಗ್ ಸುರ್ಜೆವಾಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಮುಖಂಡ, ಶಾಸಕ ಸತೀಶ್ ಜಾರಕಿಹೊಳಿ, ಹಿಂದೂ ಪದದ ಅರ್ಥ ಬಹಳ ಅಶ್ಲೀಲ. ಹಿಂದೂ ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ಪದ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.

ಸತೀಶ್ ಹೇಳಿಕೆಗೆ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಖಂಡನೆ ವ್ಯಕ್ತಪಡಿಸಿದ್ದು,ಹಿಂದೂ ಧರ್ಮವು ನಾಗರಿಕ ವಾಸ್ತವವಾಗಿದೆ ಎಂದು ಹೇಳಿದ್ದಾರೆ.

ಪ್ರತಿಯೊಂದು ಧರ್ಮ, ನಂಬಿಕೆ ಮತ್ತು ನಂಬಿಕೆಗಳನ್ನು ಗೌರವಿಸಲು ಕಾಂಗ್ರೆಸ್ ನಮ್ಮ ರಾಷ್ಟ್ರವನ್ನು ನಿರ್ಮಿಸಿತು. ಇದು ಭಾರತದ ಸಾರವಾಗಿದೆ. ಸತೀಶ್ ಜಾರಕಿಹೊಳಿ ಅವರ ಹೇಳಿಕೆ ದುರದೃಷ್ಟಕರ , ಅವರು ಈ ರೀತಿಯಾದ ಹೇಳಿಕೆ ನೀಡಬಾರದು , ಇದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!