April 26, 2026
Sunday, April 26, 2026
spot_img

ಒಳ ಮೀಸಲಾತಿಗೆ ಜನಬೆಂಬಲ ಹೆಚ್ಚುತ್ತಿದೆ: ಸರ್ಕಾರದ ನಡೆ ಐತಿಹಾಸಿಕ ಎಂದ ಸತೀಶ್ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳ ಮೀಸಲಾತಿ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೈಗೊಂಡ ಈ ಕ್ರಮ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಇದರಿಂದ ವಿವಿಧ ಸಮುದಾಯಗಳಲ್ಲಿ ತೃಪ್ತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಸಮಗ್ರ ಚರ್ಚೆ ನಡೆದಿದ್ದು, ಎಲ್ಲಾ ಸಚಿವರೂ ಏಕಮತದಿಂದ ತೀರ್ಮಾನಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದರು. ಬೇರೆ ಬೇರೆ ಸಮುದಾಯಗಳನ್ನು ಪ್ರತಿನಿಧಿಸುವ ಸಚಿವರು ಸಭೆಯಲ್ಲಿ ಭಾಗಿಯಾಗಿದ್ದರೂ ಯಾವುದೇ ಭಿನ್ನಾಭಿಪ್ರಾಯ ವ್ಯಕ್ತವಾಗಲಿಲ್ಲ ಎಂಬುದು ಈ ನಿರ್ಧಾರದ ಮಹತ್ವವನ್ನು ತೋರಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ:

ಒಳ ಮೀಸಲಾತಿ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದ್ದು, ಮೀಸಲಾತಿಯ ಲಾಭವು ಸಮುದಾಯಗಳೊಳಗಿನ ಎಲ್ಲ ವರ್ಗಗಳಿಗೂ ಸಮಾನವಾಗಿ ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ವಿವರಿಸಿದರು. .

ಈ ನಿರ್ಧಾರವನ್ನು ಟೀಕಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಸತೀಶ್ ಜಾರಕಿಹೊಳಿ, ಜನಪರ ನಿರ್ಧಾರಗಳಲ್ಲೂ ರಾಜಕೀಯ ಹುಡುಕುವುದು ವಿಪಕ್ಷಗಳ ಸ್ವಭಾವ ಎಂದು ತಿರುಗೇಟು ನೀಡಿದರು. ಜನರ ಬೆಂಬಲವೇ ಸರ್ಕಾರದ ಕ್ರಮಕ್ಕೆ ದೊಡ್ಡ ಸಾಕ್ಷಿ ಎಂದು ಅವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !