Tuesday, November 4, 2025

ಯತೀಂದ್ರ ಹೇಳಿಕೆ ಬಗ್ಗೆ ಫಸ್ಟ್‌ ರಿಯಾಕ್ಷನ್‌ ಕೊಟ್ಟ ಸತೀಶ್‌ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಏನೇ ಆಗಲಿ ಅದನ್ನು ಪಕ್ಷ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು.

ಯತಿಂದ್ರ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಅಂತಿಮವಾಗಿ ಯಾರು ನಾಯಕ ಎನ್ನುವುದನ್ನು ಪಕ್ಷದ ಶಾಸಕರು ನಿರ್ಧಾರ ಮಾಡುತ್ತಾರೆ. ಅಹಿಂದ ನಾಯಕತ್ವ ಇಲ್ಲದೇ ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. 

error: Content is protected !!