Tuesday, March 28, 2023

Latest Posts

ಉತ್ತರ ಪ್ರದೇಶದಲ್ಲಿ ನೂತನ ವಿಧಾನ ಸಭಾ ಕಟ್ಟಡ ಶೀಘ್ರದಲ್ಲಿ ನಿರ್ಮಾಣ : ಸತೀಶ್ ಮಹಾನಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಉತ್ತರ ಪ್ರದೇಶ ರಾಜ್ಯ ರಾಜಧಾನಿಯಲ್ಲಿ ಹೊಸ ವಿಧಾನ ಸಭಾ ಕಟ್ಟಡ ನಿರ್ಮಾಣವಾಗಲಿದೆ ಎಂದು ಉತ್ತರ ಪ್ರದೇಶ ವಿಧಾನಸಭೆಯ ಸ್ಪೀಕರ್ ಸತೀಶ್ ಮಹಾನಾ ಘೋಷಿಸಿದ್ದಾರೆ.

2027ಕ್ಕೆ 18ನೇ ವಿಧಾನಸಭೆ ಅವಧಿ ಮುಗಿಯಲಿದ್ದು, ಹೊಸ ಕಟ್ಟಡದಲ್ಲಿ ಕೆಲವು ಸಭೆಗಳನ್ನು ನಡೆಸಲು ಉಪಯುಕ್ತವಾಗಲಿದೆ ಎಂಬ ಆಶಾವಾದ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಗೆ ಹಣ ಮೀಸಲಿಟ್ಟಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಸ್ಪೀಕರ್ ತಿಳಿಸಿದರು.

ಯುಪಿ ಸರ್ಕಾರವು ಹೊಸ ವಿಧಾನ ಸಭೆಯನ್ನು ವಿನ್ಯಾಸಗೊಳಿಸಲು ಸಲಹೆಗಾರರನ್ನು ನೇಮಿಸಿಕೊಳ್ಳುವ ಸಾಧ್ಯತೆಯಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!