ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ, ಶಿವಮೊಗ್ಗ:
ಜಿಲ್ಲೆಯಲ್ಲಿ ಶನಿವಾರ 803 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 762 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ 15 ಜನ ಮೃತಪಟ್ಟಿದ್ದು, ಮೃತರ ಸಂಖ್ಯೆ 572 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ 178, ಭದ್ರಾವತಿ 68, ಶಿಕಾರಿಪುರ 155, ತೀರ್ಥಹಳ್ಳಿ 113, ಸೊರಬ 74, ಸಾಗರ 152, ಹೊಸನಗರ 52 ಹಾಗೂ ಹೊರ ಜಿಲ್ಲೆಯ 11 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣ 7318 ಕ್ಕೆ ಏರಿಕೆಯಾಗಿವೆ. 2093 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 610 ಜನ, ಖಾಸಗಿ ಆಸ್ಪತ್ರೆಯಲ್ಲಿ 538 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 363 ಜನರಿದ್ದು, ಡಿಸಿಎಚ್ ಸಿಯಲ್ಲಿ 207 ಜನ ಹಾಗೂ
4711 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.