ಅಕ್ರಮ ಹಣ ವರ್ಗಾವಣೆ ಪ್ರಕರಣ: ಆಪ್ ಸಚಿವ 14 ದಿನಗಳ ನ್ಯಾಯಾಂಗ ಬಂಧನಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿ ಆರೋಗ್ಯ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ರಿಮಾಂಡ್ ಮುಗಿದ ನಂತರ ಜೈನ್ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಾಳೆ ಬೆಳಗ್ಗೆ 11 ಗಂಟೆಗೆ ಜೈನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಮೇ 30 ರಂದು ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಲಾಯಿತು. ಇಡಿ ಪರ ನ್ಯಾಯವಾದಿ ಎಸ್‌ವಿ ರಾಜು, ಜೈನ್‌ ಕಸ್ಟಡಿಯಲ್ಲಿರುವ ವೇಳೆ ಇಡಿ ಹಲವಾರು ಸ್ಥಳಗಳಲ್ಲಿ ಶೋಧ ನಡೆಸಿದ್ದು, ನಗದು ಮತ್ತು ದಾಖಲೆಗಳು ಸೇರಿದಂತೆ ಕೆಲವು ದೋಷಾರೋಪಣೆಯ ವಸ್ತುಗಳು ಪತ್ತೆಯಾಗಿವೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಜೈನ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!