ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವೆ ಬಗೆಹರಿಯದೆ ಉಳಿದಿರುವ ಹಲವು ವಿಷಯಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮಾತುಕತೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸೌದಿ ಆರೇಬಿಯಾ ಹೇಳಿದೆ.
ಸೌದಿ ಅರೇಬಿಯಾದ ಪ್ರವಾಸದಲ್ಲಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮತ್ತು ರಾಜಕುಮಾರ ಮಹಮ್ಮದ್ ಬಿನ್ ಸಲ್ಮಾನ್ ಈ ನಿಟ್ಟಿನಲ್ಲಿ ಹೊರಡಿಸಿರುವ ಜಂಟಿ ಹೇಳಿಕೆಯನ್ನು ಪಾಕಿಸ್ತಾನದ ವಿದೇಶಾಂಗ ಕಚೇರಿ ಬಿಡುಗಡೆ ಮಾಡಿದೆ.
‘ಕಾಶ್ಮೀರ ಗಡಿಯಲ್ಲಿ ಉದ್ನಿಗ್ನತೆ ಶಮನಗೊಳಿಸಲು ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮದ ಎಲ್ಲಾ ಒಪ್ಪಂದಗಳನ್ನು ಪಾಲಿಸಲು ಸಮ್ಮತಿ ಸೂಚಿಸಿರುವುದು ಸ್ವಾಗತಾರ್ಹ’ ಎಂದು ಸೌದಿ ರಾಜಕುಮಾರ ಹೇಳಿದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.