ಭಾರತೀಯರಿಗೆ ಸೌದಿ ಸರ್ಕಾರ ಗುಡ್‌ನ್ಯೂಸ್: ವೀಸಾಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಬೇಕಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೌದಿ ಅರೇಬಿಯಾಕ್ಕೆ ತೆರಳುವ ಭಾರತೀಯ ನಾಗರಿಕರಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ಸೌದಿ ಅರೇಬಿಯಾಗೆ ಪ್ರಯಾಣಿಸಲು ವೀಸಾ ಪಡೆಯುವ ಭಾರತೀಯರು, ಪೊಲೀಸ್ ಪರಿಶೀಲನೆ ಪ್ರಮಾಣಪತ್ರವನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಸೌದಿ ಅರೇಬಿಯಾ ರಾಯಭಾರ ಕಚೇರಿ ನವೆಂಬರ್ 17 ರಂದು ಈ ಘೋಷಣೆ ಮಾಡಿದೆ. ಎರಡು ದೇಶಗಳ ನಡುವೆ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನದ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಬಲವಾದ ಬಾಂಧವ್ಯ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ನಾಗರಿಕರಿಗೆ ಪೊಲೀಸ್ ಪರಿಶೀಲನಾ ಪ್ರಮಾಣಪತ್ರವನ್ನು (ಪಿಸಿಸಿ) ಸಲ್ಲಿಸುವುದರಿಂದ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದೆ. ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಭಾರತೀಯ ನಾಗರಿಕರು ಪಿಸಿಸಿ ವೀಸಾವನ್ನು ಪಡೆಯುವ ಅಗತ್ಯವಿಲ್ಲ. ಸೌದಿ ಅರೇಬಿಯಾದಲ್ಲಿ ಶಾಂತಿಯುತವಾಗಿ ವಾಸಿಸುತ್ತಿರುವ ಎರಡು ಮಿಲಿಯನ್ ಭಾರತೀಯ ನಾಗರಿಕರ ಸಹಕಾರವನ್ನು ಶ್ಲಾಘಿಸುವುದಾಗಿ ರಾಯಭಾರ ಕಚೇರಿ ಹೇಳಿದೆ.

ಸೌದಿ ಸರಕಾರದ ನಿರ್ಧಾರದಿಂದ ವೀಸಾ ಅರ್ಜಿ ಪ್ರಕ್ರಿಯೆ ಚುರುಕುಗೊಳ್ಳಲಿದೆ. ಅಲ್ಲದೆ, ಪ್ರವಾಸೋದ್ಯಮ ಸಂಸ್ಥೆಗಳ ಕೆಲಸವೂ ಸುಲಭವಾಗುತ್ತದೆ. ಆ ಮಟ್ಟಿಗೆ ಪ್ರವಾಸಿಗರಿಗೆ ದಾಖಲೆಗಳ ಹೊರೆ ಕಡಿಮೆಯಾಗಲಿದೆ. ಪ್ರಸ್ತುತ ಸೌದಿ ಅರೇಬಿಯಾದಲ್ಲಿ ಸುಮಾರು 20 ಲಕ್ಷ ಭಾರತೀಯರು ಶಾಂತಿಯುತವಾಗಿ ಬದುಕುತ್ತಿದ್ದಾರೆ ಎಂದು ಆ ದೇಶ ತಿಳಿಸಿರುವುದಾಗಿ ನವದೆಹಲಿಯಲ್ಲಿರುವ ಸೌದಿ ರಾಯಭಾರ ಕಚೇರಿ ಟ್ವಿಟರ್‌ನಲ್ಲಿ ಬರೆದುಕೊಂಡಿದೆ. ವಾಸ್ತವವಾಗಿ, ಸೌದಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಈ ತಿಂಗಳು ಭಾರತಕ್ಕೆ ಭೇಟಿ ನೀಡಡಿ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಶೆಡ್ಯೂಲ್‌ ಇತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರವಾಸ ರದ್ದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!