ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣಿಸದಂತೆ ತನ್ನ ನಾಗರಿಕರಿಗೆ ಸೂಚಿಸಿದ ಸೌದಿ ಅರೇಬಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇತ್ತೀಚಿನ ವಾರಗಳಲ್ಲಿ ಅಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಳ ಕಾಣುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾವು ಭಾರತ ಸೇರಿದಂತೆ ಒಟ್ಟು 15 ದೇಶಗಳಿಗೆ ತನ್ನ ನಾಗರಿಕರು ಪ್ರಯಾಣಿಸುವುದನ್ನು ನಿಷೇಧಿಸಿದೆ.
ಭಾರತವಲ್ಲದೆ, ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೇನಿಯಾ, ಬೆಲಾರಸ್ ಮತ್ತು ವೆನೆಜುವೆಲಾ ದೇಶಗಳಿಗೆ ಪ್ರಯಾಣಿಸದಂತೆ ಸೌದಿ ತನ್ನ ನಾಗರಿಕರಿಗೆ ಸೂಚಿಸಿದೆ.
ಮೇಲ್ಕಂಡ ದೇಶಗಳಿಗೆ ಪ್ರಯಾಣಿಸಲು ಇಚ್ಚಿಸುವ ನಾಗರಿಕರಿಗೆ ಸೌದಿ ನಾಗರಿಕರಿಗೆ ನಿಷೇಧವು ಅನ್ವಯಿಸುತ್ತದೆ. ಆದರೆ, ಭಾರತೀಯ ಪ್ರಜೆಗಳು ಸೌದಿ ಅರೇಬಿಯಾ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆಯೇ ಎಂಬುದರ ಕುರಿತು ಮಾಹಿತಿ ತಿಳಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!