March 23, 2026
Monday, March 23, 2026
spot_img

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ‘ಸುಪ್ರೀಂ’ ನೊಟೀಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಗೊಂಡಿದ್ದು, ಈ ವೇಳೆ ರಾಜ್ಯ ಸರ್ಕಾರ, ಸಿಬಿಐಗೆ ನೊಟೀಸ್ ಜಾರಿಗೊಳಿಸಿದೆ.

ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯಳ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆದರೆ ಇದೀಗ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠವು, ವಿಚಾರಣೆ ನಡೆಸಿ ನೊಟೀಸ್ ಜಾರಿ ಮಾಡಿದೆ. ಏಪ್ರಿಲ್ 28ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !