ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದ ಭಾಗಿಲು ತಟ್ಟಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ, ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ಇಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಪತ್ರದಲ್ಲಿ ನಾನು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಪಕ್ಷದಲ್ಲಿನ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ನನಗೆ ನೀಡಿದ ಮಾತು ತಪ್ಪಿದ್ದಾರೆ. ನನಗೆ ಕೊಟ್ಟ ಮಾತು ತಪ್ಪಿದ್ದರಿಂದ ನಾನು ಇಂದು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ ಎಂದರು.
2019ರ ಅಥಣಿ ಬೈ ಎಲೆಕ್ಷನ್ ಸಂದರ್ಭದಲ್ಲಿ ಬಿಜೆಪಿ ನಾಯಕರು ನನಗೆ 2023ರ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡುವುದಾಗಿ ತಿಳಿಸಿದ್ದರು. ಅಥಣಿಯಿಂದ ಈ ಬಾರಿ ನನಗೆ ಟಿಕೆಟ್ ನೀಡುವ ನಿರೀಕ್ಷೆಯಲ್ಲಿದ್ದೆನು. ಆದ್ರೇ ನನಗೆ ಬಿಜೆಪಿ ನಾಯಕರು ಕೊಟ್ಟ ಮಾತು ತಪ್ಪಿದ್ದರಿಂದ ಬೇಸರಗೊಂಡು ಪಕ್ಷಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.