April 26, 2026
Sunday, April 26, 2026
spot_img

ʼಕೋಗಿಲು ಉಳಿಸಿ- ಅಕ್ರಮ ವಲಸಿಗರನ್ನು ತೊಲಗಿಸಿʼ ಬಿಜೆಪಿಯಿಂದ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ’ ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಭಟನೆಗೆ ವೇದಿಕೆ ಹಾಕಲು ಅವಕಾಶ ಕೊಡುವುದಿಲ್ಲ, ಇದೇನು ಇವರ ಅಪ್ಪನ ಮನೆಯ ಸರ್ಕಾರವೇ ಎಂದು ಕಿಡಿಕಾರಿದರು. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಇಂಥ ಗೊಡ್ಡು ಬೆದರಿಕೆಗೆ ಹೆದರುವವರು ಬಿಜೆಪಿ ಕಾರ್ಯಕರ್ತರಲ್ಲ, ಇದನ್ನು ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಇದನ್ನೂ ಓದಿ: Benefits | ಜೀರ್ಣಕ್ರಿಯೆಯಿಂದ ಚರ್ಮದ ಕಾಂತಿಯವರೆಗೆ: ಅನಾನಸ್ ಹಣ್ಣಿನಲ್ಲಿದೆ ಆರೋಗ್ಯದ ರಹಸ್ಯ!

ಮನೆ ಕೆಡವಿದ್ದೇ ಕಾಂಗ್ರೆಸ್ ಸರ್ಕಾರ. ಆದರೆ ಕೆ.ಸಿ.ವೇಣುಗೋಪಾಲ್ ಅವರು ಬೆದರಿಸಿದ ತಕ್ಷಣ ಸಿದ್ದರಾಮಯ್ಯನವರು ತಮ್ಮ ಸಿಎಂ ಕುರ್ಚಿ ಕಳೆದುಕೊಳ್ಳುವ ಭೀತಿಯಿಂದ ಅಕ್ರಮ ವಲಸಿಗರಿಗೆ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆ ಎಂದು ಟೀಕಿಸಿದರು. 

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !