ಹೊಸದಿಗಂತ ಡಿಜಿಟಲ್ ಡೆಸ್ಕ್:
ತನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ ಎಸ್ಬಿಐ ಅಧ್ಯಕ್ಷ ಡಿಕೆ ಖಾರಾ ಅವರನ್ನು ಅಪಹರಿಸಿ ಹತ್ಯೆ ಮಾಡುವುದಾಗಿ ಹಾಗೂ ಎಸ್ಬಿಐ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿವೆ. ಈ ಹಿನ್ನೆಲೆಯಲ್ಲಿ ಖಾರಾ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಪೊಲೀಸರ ಪ್ರಕಾರ, ಖಾರಾಗೆ ಮೊಹಮ್ಮದ್ ಜಿಯಾಲ್ ಎಂಬ ವ್ಯಕ್ತಿಯಿಂದ ಕರೆ ಬಂದಿದೆ. ಪಾಕಿಸ್ತಾನದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ ವ್ಯಕ್ತಿ ತನಗೆ ಬೇಕಾದವರಿಗೆ ಹತ್ತು ಲಕ್ಷ ರೂಪಾಯಿ ಸಾಲ ಒಂದು ವಾರದೊಳಗೆ ಕೊಡಿ, ಇಲ್ಲವಾದರೆ ಕಿಡ್ನಾಪ್ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಎಸ್ಬಿಐ ಪ್ರಧಾನ ಕಚೇರಿ ಕಟ್ಟಡ ಸ್ಫೋಟಿಸುವುದಾಗಿ ಕೂಡಾ ಬೆದರಿಕೆ ಹಾಕಿದ್ದಾನೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಈ ಕರೆ ಎಲ್ಲಿಂದ ಬಂತು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆರೋಪಿ ಹೇಳಿಕೊಂಡಂತೆ ಪಾಕಿಸ್ತಾನದಿಂದ ಕರೆ ಬಂದಿಲ್ಲ, ಪಶ್ಚಿಮ ಬಂಗಾಳದಿಂದ ಕರೆ ಬಂದಿದೆ ಎಂಬುದನ್ನು ಅಧಿಕಾರಿಗಳು ಕಂಡುಕೊಂಡರು. ಸದ್ಯ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.