ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೇಷನರಿ ಅಧಿಕಾರಿ (PO) ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ.
ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.
ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1: ಮೊದಲು ಎಸ್‌ಬಿಐ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ.
ಸ್ಟೆಪ್ 2: Careers ಆಯ್ಕೆ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ‘SBI PO 2023’ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಈಗ ಫಲಿತಾಂಶದ ಪೇಜ್ ತೆರೆಯುತ್ತದೆ.
ಸ್ಟೆಪ್ 5: ಲಾಗಿನ್ ಆಗಿ ಫಲಿತಾಂಶ ವೀಕ್ಷಿಸಬಹುದು.