ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಎಸ್‌ಬಿಐ 2,000 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 2000 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಈ ಬೃಹತ್‌ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ಪದವಿ ವಿದ್ಯಾರ್ಹತೆ ಜೊತೆಗೆ ಏಪ್ರಿಲ್‌ 1,2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಇಂದು ಸಂಜೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!