ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2000 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ಏಪ್ರಿಲ್ 1,2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 27,2023ರೊಳಗೆ ಅರ್ಜಿಯನ್ನು ಹಾಕಬಹುದು.