ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5447 ಸರ್ಕಲ್ ಬೇಸ್ಡ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ಅಕ್ಟೋಬರ್ 31,2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/-ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 12,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.