ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6160 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ಆಗಸ್ಟ್ 1,2023ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸೆಪ್ಟೆಂಬರ್ 21,2023ರೊಳಗೆ ಅರ್ಜಿಯನ್ನು ಹಾಕಬಹುದು.