ಎಸ್‌ಬಿಐ ಸರ್ವರ್ ಡೌನ್: ನೆಟ್‌ ಬ್ಯಾಂಕಿಂಗ್‌, ಯುಪಿಐ ಇಲ್ಲದೇ ಪರದಾಡುತ್ತಿದ್ದಾರೆ ಗ್ರಾಹಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದ ಪ್ರತಿಷ್ಟಿತ ಬ್ಯಾಂಕುಗಳಲ್ಲೊಂದಾದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಸರ್ವರ್‌ ಡೌನ್‌ ಆಗಿದ್ದು ಇಂಟರ್ನೆಟ್‌ ಬ್ಯಾಂಕಿಂಗ್‌, ಯುಪಿಐ , ಎಸ್‌ಬಿಐ ಯೋನೋ ಸೇರಿದಂತೆ ಬ್ಯಾಂಕಿನ ಡಿಜಿಟಲ್‌ ಸೇವೆಗಳು ಲಭ್ಯವಾಗುತ್ತಿಲ್ಲ. ಈ ಕುರಿತು ಬ್ಯಾಂಕಿನ ಅನೇಕ ಗ್ರಾಹಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು ಹಲವಾರು ಗ್ರಾಹಕರು ಟ್ವಿಟರ್‌ನಲ್ಲಿ ಬ್ಯಾಂಕಿನ ಡಿಜಿಟಲ್ ಸೇವೆಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.

ಇಂಟರ್ನೆಟ್ ಬ್ಯಾಂಕಿಂಗ್ (ನೆಟ್ ಬ್ಯಾಂಕಿಂಗ್), UPI ಪಾವತಿಗಳು, ಅಧಿಕೃತ SBI ಅಪ್ಲಿಕೇಶನ್ (YONO) ನಂತಹ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಳಕೆದಾರರು ಟ್ವೀಟ್‌ ಮಾಡಿದ್ದಾರೆ. ಕೆಲವು ಬಳಕೆದಾರರು ಕಳೆದ ಕೆಲವು ದಿನಗಳಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದು ಈಕುರಿತು ಹಲವರು ಟ್ವೀಟರ್‌ ನಲ್ಲಿ ಅವರ ಅನುಭವಗಳನ್ನು ಹಂಚಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!