ಮಾಡಾಳ್ ಜಾಮೀನು ಪ್ರಶ್ನಿಸಿ ಲೋಕಾಯುಕ್ತ ಅರ್ಜಿ: ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್‌ಡಿಎಲ್‌) ಲಂಚ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿರುವ ಲೋಕಾಯುಕ್ತರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಕರ್ನಾಟಕ ಹೈಕೋರ್ಟ್ ಶಾಸಕರಿಗೆ ಮಾರ್ಚ್‌ 7ರಂದು ಈ ಪ್ರಕರಣದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಲೋಕಾಯುಕ್ತ, ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿಸಲ್ಲಿಸಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿದ್ದಾರೆ.

ಈ ಅರ್ಜಿ ವಿಚಾರಣೆ ಇಂದು (ಮಾರ್ಚ್ 14) ಮಧ್ಯಾಹ್ನ 2 ಗಂಟೆ ನಂತರ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!