ಶಾಲೆ ಮತ್ತು ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಋತುಚಕ್ರದ ರಜೆ ಮನವಿ : ಅರ್ಜಿ ವಜಾಗೊಳಿಸಿದ ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಶಾಲಾ-ಕಾಲೇಜುಗಳಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಋತುಚಕ್ರದ ರಜೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ, ಸಿಜೆಐ ಡಿವೈ ಚಂದ್ರಚೂಡ್ ಅವರು ಇಂದು ಆಲಿಸಿದರು. ವಿಚಾರಣೆಯ ನಂತರ, ಅರ್ಜಿಯನ್ನು ವಜಾಗೊಳಿಸಲಾಯಿತು.

ವಿಚಾರಣೆ ವೇಳೆ ಸಿಜೆಐ ಚಂದ್ರಚೂಡ್ ಅವರು ಈ ವಿಷಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಬಳಿ ಕೇಳಬೇಕು ಎಂದು ತಿಳಿಸಿದರು.

“ನೀತಿ ದೃಷ್ಟಿಕೋನಗಳಿಗೆ ಸಂಬಂಧಿಸಿದಂತೆ, ಅರ್ಜಿದಾರರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸಿದರೆ ಅದು ಸೂಕ್ತವಾಗಿರುತ್ತದೆ. ಅರ್ಜಿಯನ್ನು ಅದರ ಪ್ರಕಾರ ವಿಲೇವಾರಿ ಮಾಡಲಾಗಿದೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದರು.

ಅರ್ಜಿಯಲ್ಲಿ, ಸುಪ್ರೀಂ ಕೋರ್ಟ್ ಎಲ್ಲಾ ವಿದ್ಯಾರ್ಥಿನಿಯರಿಗೆ, ಕಾರ್ಮಿಕ ವರ್ಗದ ಮಹಿಳೆಯರಿಗೆ ಆಯಾ ಕೆಲಸದ ಸ್ಥಳಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಋತುಚಕ್ರದ ರಜೆಯನ್ನು ಅನುಮತಿಸುವ ನಿಯಮಗಳನ್ನು ರೂಪಿಸಲು ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೇಳಲಾಗಿತ್ತು.

ಭಾರತವು ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆಯನ್ನು ಇನ್ನೂ ಜಾರಿಗೆ ತಂದಿಲ್ಲ. ಇತ್ತೀಚೆಗೆ ಕೇರಳ ಸರ್ಕಾರವು ಉನ್ನತ ಶಿಕ್ಷಣ ಇಲಾಖೆಗೆ ಸಂಯೋಜಿತವಾಗಿರುವ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ದಾಖಲಾದ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆಯನ್ನು ಘೋಷಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!