Tuesday, May 30, 2023

Latest Posts

ರಾಷ್ಟ್ರಪತಿಯಿಂದ ಸಂಸತ್ ಭವನ ಉದ್ಘಾಟನೆಗೆ ಮನವಿ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ಪ್ರಥಮ ಪ್ರಜೆ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆಗೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತಾಗಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್‌ ಇಂದು ನಿರಾಕರಿಸಿದೆ.

ಸಂವಿಧಾನದ 79ನೇ ವಿಧಿಯ ಅನ್ವಯ ರಾಷ್ಟ್ರಪತಿಗಳು ಸಂಸತ್‌ನ ಅವಿಭಾಜ್ಯ ಅಂಗ. ಹೀಗಾಗಿ ಉದ್ಘಾಟನಾ ಕಾರ್ಯಕ್ರಮದಿಂದ ಅವರನ್ನು ದೂರ ಇರಿಸುವಂತೆ ಇಲ್ಲ. ಈ ಹಿನ್ನೆಲೆಯಲ್ಲಿ ಲೋಕಸಭೆಯ ಕಾರ್ಯಾಲಯಕ್ಕೆ ಹೊಸ ಸಂಸತ್‌ ಭವನವನ್ನು ರಾಷ್ಟ್ರಪತಿಗಳಿಂದ ನಡೆಸಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು

“ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ, ಇದನ್ನು ಪರಿಗಣಿಸಲು ನಾವು ಒಲವು ತೋರುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಪೀಠವು ಅರ್ಜಿ ವಜಾಗೊಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!