ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್​ಗೆ ಮಧ್ಯಂತರ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್​ ಜೈಲಿನಲ್ಲಿರುವ ಮಾಜಿ ಸಚಿವ ಮತ್ತು ಎಎಪಿ ಮುಖಂಡ ಸತ್ಯೇಂದರ್ ಜೈನ್‌ಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಸತ್ಯೇಂದ್ರ ಜೈನ್​ ಅನಾರೋಗ್ಯದಿಂದ ಬಳಲುತ್ತಿದ್ದು, ವಾರದಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಕೂಡ ಜೈಲಿನ ಬಾತ್​ರೂಮ್​ನಲ್ಲಿ ಕುಸಿದುಬಿದ್ದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಕಾರಣಗಳಿಂದಾಗಿ ಸುಪ್ರೀಂಕೋರ್ಟ್​ ಜುಲೈ 11ರವರೆಗೆ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಾಲಯವು ಜುಲೈ 10 ರಂದು ಮುಂದಿನ ವಿಚಾರಣೆ ನಡೆಸಲಿದೆ.

ದೆಹಲಿಯ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದ ಸಚಿವರಾಗಿದ್ದ 57 ವರ್ಷದ ಸತ್ಯೇಂದ್ರ ಜೈನ್ ಅವರನ್ನು ಮೇ 30ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

ಕೋಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಮೇ ತಿಂಗಳಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು.

ತನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ಸತ್ಯೇಂದ್ರ ಜೈನ್ ಅವರು ಷೇರುದಾರರಾಗಿದ್ದ 4 ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಇಡಿ ಆರೋಪ ಮಾಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!