ರಾಜೀವ್‌ ಗಾಂಧಿ ಹತ್ಯೆ ಕೇಸ್‌: 6 ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅವರನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ಶಿಫಾರಸು ಮಾಡಿತ್ತು. ಈ ಪ್ರಕರಣದಲ್ಲಿ ಆರೋಪಿಗಳಾಗಿ ಬಂಧಿತರಾಗಿ ಹಲವು ವರ್ಷಗಳಿಂದ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್‌ ಅಲ್ಲದೇ ರಾಬರ್ಟ್ ಪಾಯಸ್, ರವಿಚಂದ್ರನ್, ರಾಜಾ, ಸಂತನ್‌, ಶ್ರೀಹರನ್ ಬಿಡುಗಡೆಗಾಗಿ ಹಲವು ದಿನಗಳಿಂದ ನ್ಯಾಯಾಲಯಕ್ಕೆ ಮನವಿ ಸಲ್ಲಿಸುತ್ತಿದ್ದಾರೆ.

ಈ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ ಅಪರಾಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಎಲ್ಲ ಅಂಶಗಳನ್ನು ಪರಿಗಣಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ನಾಗರತ್ನ ಅವರನ್ನೊಳಗೊಂಡ ಪೀಠವು ಎಲ್ಲರ ಅಭಿಪ್ರಾಯಗಳನ್ನು ಪಡೆದ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡಲು ಆದೇಶಿಸಿತು.

ಮೇ 21, 1991 ರ ರಾತ್ರಿ, ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಲಾಯಿತು. ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ, ಸಂತನ್, ಮುರುಗನ್, ಎಜಿ ಪೆರಾರಿವಾಲನ್, ರಾಬರ್ಟ್ ಪಯಸ್, ಜಯಕುಮಾರ್ ಮತ್ತು ರವಿಚಂದ್ರನ್ ಆರೋಪಿಗಳು. 1998 ರಲ್ಲಿ, ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಏಳು ಜನರಿಗೆ ಮರಣದಂಡನೆ ವಿಧಿಸಿತು, ನಂತರ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು. ಸೆಪ್ಟೆಂಬರ್ 9, 2018 ರಂದು ನಡೆದ ಸಂಪುಟ ಸಭೆಯಲ್ಲಿ, ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ ಕ್ಷಮಾದಾನ ನೀಡಲು ತಮಿಳುನಾಡು ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿತು. ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿತ್ತು. ಆದರೆ, ರಾಜ್ಯಪಾಲರು ಈ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಳಂಬ ಮಾಡಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಕಲಂ 161ರ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ಇರುವ ಅಧಿಕಾರದ ಪ್ರಕಾರ ಕ್ಷಮಾದಾನ ನೀಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ರಾಜ್ಯ ಸರ್ಕಾರದ ನಿರ್ಧಾರದಂತೆ ಕ್ಷಮಾದಾನ ನೀಡುವಂತೆ ನಳಿನಿ ಮತ್ತು ರವಿಚಂದ್ರನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಏತನ್ಮಧ್ಯೆ, ಈ ಅಪರಾಧಿಗಳಲ್ಲಿ ಒಬ್ಬರಾದ ಪೆರಿವಾಲನ್ 30 ವರ್ಷಗಳ ಜೈಲು ಶಿಕ್ಷೆಯ ನಂತರ ಇತ್ತೀಚೆಗೆ ಬಿಡುಗಡೆಯಾದರು. ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಉಳಿದವರನ್ನು ಸಹ ಬಿಡುಗಡೆ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!