ಒಳಮೀಸಲಾತಿ ವಿಚಾರದಲ್ಲಿ ಕಾನೂನು ಕೈಗೆತ್ತಿಕೊಳ್ಳಬೇಡಿ: ಗೃಹ ಸಚಿವ ಆರಗ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ‌

ಒಳಮೀಸಲಾತಿ ವಿಚಾರದಲ್ಲಿ ಯಾರಿಗೇ ಅನ್ಯಾಯವಾಗಿದ್ದರೂ ಅದನ್ನು ಸರಿಪಡಿಸಲು ಸರ್ಕಾರ ಸಿದ್ಧವಿದೆ. ಹೀಗಾಗಿ ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ, ಇದನ್ನು ಇಲ್ಲಿಗೆ ನಿಲ್ಲಿಸಿ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಶಿಕಾರಿಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಒಳಮೀಸಲಾತಿ ಮೂಲಕ ಎಲ್ಲರಿಗೂ ನ್ಯಾಯ ಒದಗಿಸುವ ವಿಶೇಷ ಪ್ರಯತ್ನ ಸರ್ಕಾರ ಮಾಡಿದೆ. ಅನಗತ್ಯ ವದಂತಿಗಳಿಂದ ಯಾರೂ ಪ್ರಚೋದಿತರಾಗಬಾರದು. ಇದು ಎಲ್ಲರಿಗೂ ಲಾಭವಾದಾಯಕ ಯೋಜನೆ. ವೈಜ್ಞಾನಿಕವಾಗಿ ಮೀಸಲಾತಿ ಕೊಡುವ ಪ್ರಯತ್ನ ಇಲ್ಲಿ ನಡೆದಿದೆ. ಇದನ್ನು ಎಲ್ಲ ಸಮುದಾಯಗಳು ಅರ್ಥ ಮಾಡಿಕೊಳ್ಳಬೇಕು‘ ಎಂದರು.

ಚುನಾವನೆಯ ಸಂದರ್ಭದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯಾರೋ ಪ್ರಚೋದಿಸಿದ್ದಾರೆ. ಅವರ ಪ್ರಚೋದನೆಯಿಂದ ಈ ಘಟನೆ ನಡೆದಿದೆ. ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಬಂಜಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಮನೆ ಮೇಲೆ ದಾಳಿ ಮಾಡಿದ್ದು, ಖಂಡನೀಯ. ಆದರೆ ದಾಳಿ ಮಾಡಿದವರೊಂದಿಗೆ ವಿಚಾರಣೆ ನಡೆಸುತ್ತೇವೆ. ಈ ಕುರಿತು ಚರ್ಚೆ ಮಾಡೋಣ, ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುವುದು ಒಳ್ಳೇಯದಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!